Psalms 109:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು ನನ್ನ ವಿಷಯವಾಗಿ ಸುಳ್ಳಾಡುತ್ತಿದ್ದಾರೆ. ಅವರು ಅಸತ್ಯವಾದವುಗಳನ್ನು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
Kannada BSI Bible 2016
ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನೂ ವಂಚಕನೂ ನನಗೆ ವಿರೋಧವಾಗಿ ಬಾಯ್ದೆರೆಯ ಮಾಡಿದ್ದಾರೆ. ಸುಳ್ಳುನಾಲಿಗೆಯು ನನ್ನೊಡನೆ ಮಾತಾಡಿತು.
Kannada Bible (KNCL) BSI 2016
ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.