Psalms 109:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
Kannada BSI Bible 2016
ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
Kannada Bible (KNCL) BSI 2016
ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.