Psalms 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
Kannada BSI Bible 2016
ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;
Kannada Bible (KNCL) BSI 2016
“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.