Psalms 110:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
Kannada BSI Bible 2016
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.
Kannada Bible (KNCL) BSI 2016
ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”