Psalms 110:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
Kannada BSI Bible 2016
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.
Kannada Bible (KNCL) BSI 2016
ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.