Psalms 111:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
Kannada BSI Bible 2016
ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಹುವಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ ನೆರೆದ ಸಭೆಯಲ್ಲಿಯೂ ಮನಃಪೂರ್ವಕವಾಗಿ ಕೀರ್ತಿಸುವೆನು.
Kannada Bible (KNCL) BSI 2016
ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.