Psalms 112:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
Kannada BSI Bible 2016
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.
Kannada Bible (KNCL) BSI 2016
ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.