Psalms 115:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
Kannada BSI Bible 2016
ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿಸತ್ಯತೆಗಳ ನಿವಿುತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
Kannada Bible (KNCL) BSI 2016
ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.