Psalms 118:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
Kannada BSI Bible 2016
ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಜೇನ್ನೊಣಗಳಂತೆ ನನ್ನನ್ನು ಕವಿದರು; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹಸರಿಸುವೆನು.
Kannada Bible (KNCL) BSI 2016
ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.