Psalms 118:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಸಹಾಯಕನಾಗಿದ್ದಾನೆ. ನನ್ನ ಶತ್ರುಗಳಿಗಾಗುವ ಸೋಲನ್ನು ಕಣ್ಣಾರೆ ಕಾಣುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
Kannada BSI Bible 2016
ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
Kannada Bible (KNCL) BSI 2016
ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; ನಾನು ವೈರಿಗಳ ಮೇಲೆ ಜಯ ಸಾಧಿಸುವೆನು.