Psalms 119:116 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
Kannada BSI Bible 2016
ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು; ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
Kannada Bible (KNCL) BSI 2016
ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ.