Psalms 119:122 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
Kannada BSI Bible 2016
ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನ ಮೇಲಿಗಾಗಿ ಹೊಣೆಗಾರನಾಗು; ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
Kannada Bible (KNCL) BSI 2016
ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ; ಅಹಂಕಾರಿಗಳು ನನ್ನನ್ನು ಬಾಧಿಸದಿರಲಿ.