Psalms 119:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
Kannada BSI Bible 2016
ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
Kannada Bible (KNCL) BSI 2016
ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು.