Psalms 119:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.
Kannada BSI Bible 2016
ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.
Kannada Bible (KNCL) BSI 2016
ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು.