Psalms 119:92 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
Kannada BSI Bible 2016
ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
Kannada Bible (KNCL) BSI 2016
ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.