Psalms 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
Kannada BSI Bible 2016
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.
Kannada Bible (KNCL) BSI 2016
ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”