Psalms 123:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
Kannada BSI Bible 2016
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
Kannada Bible (KNCL) BSI 2016
ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.