Psalms 125:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
Kannada BSI Bible 2016
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಚ್ಚಾರು.
Kannada Bible (KNCL) BSI 2016
ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.