Psalms 126:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.