Psalms 127:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
Kannada BSI Bible 2016
ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
Kannada Bible (KNCL) BSI 2016
ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.