Psalms 127:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
Kannada BSI Bible 2016
ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ.
Kannada Bible (KNCL) BSI 2016
ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.