Psalms 128:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
Kannada BSI Bible 2016
ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು.
Kannada Bible (KNCL) BSI 2016
ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು.