Psalms 128:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
Kannada BSI Bible 2016
ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇವಿುನ ಸೌಭಾಗ್ಯವನ್ನು ನೋಡುವವನಾಗು.
Kannada Bible (KNCL) BSI 2016
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.