Psalms 129:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
Kannada BSI Bible 2016
ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀತಿಸ್ವರೂಪನಾದ ಯೆಹೋವನು ದುಷ್ಟರು ಹಾಕಿದ ಬಂಧನಗಳನ್ನು ಛೇಧಿಸಿಬಿಟ್ಟನು.
Kannada Bible (KNCL) BSI 2016
ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.”