Psalms 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
Kannada BSI Bible 2016
ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿ ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಷ್ಟರವರೆಗೆ ವಿರೋಧಿಯು ನನಗೆ ದೊರೆಯಾಗಿರಬೇಕು?
Kannada Bible (KNCL) BSI 2016
ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?