Psalms 132:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
Kannada BSI Bible 2016
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
Kannada Bible (KNCL) BSI 2016
ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.