Psalms 133:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
Kannada BSI Bible 2016
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada Bible (KNCL) BSI 2016
ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.