Psalms 135:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
Kannada BSI Bible 2016
ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.
Kannada Bible (KNCL) BSI 2016
ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.