Psalms 137:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.
Kannada BSI Bible 2016
ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ - ನೀವು ಚೀಯೋನಿನ ಗೀತಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ ಎಂದು ಹೇಳುತ್ತಿದ್ದರು.
Kannada Bible (KNCL) BSI 2016
ಸೆರೆಹಿಡಿದು ಬಂಧಿಸಿದಾ ಜನ ಈ ಪರಿ ಪೀಡಿಸಿದರೆಮ್ಮನು: I “ಹಾಡಿ, ನಮ್ಮ ವಿನೋದಕ್ಕಾಗಿ ಸಿಯೋನಿನ ಗೀತೆಗಳಲೊಂದನು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.