Psalms 137:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
Kannada BSI Bible 2016
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.
Kannada Bible (KNCL) BSI 2016
ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.