Psalms 137:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
Kannada BSI Bible 2016
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಳಾಗುವದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನಮಗೆ ಮಾಡಿದ್ದಕ್ಕೆ ಮುಯ್ಯಿಸಲ್ಲಿಸುವವನು ಧನ್ಯನು.
Kannada Bible (KNCL) BSI 2016
ಬಾಬಿಲೋನ್ ನಗರವೇ ಕೇಳು: ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.