Psalms 138:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
Kannada BSI Bible 2016
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.
Kannada Bible (KNCL) BSI 2016
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ.