Psalms 139:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
Kannada BSI Bible 2016
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾರ್ಗತ್ತಲೆಯು ನನ್ನನ್ನು ಕವಿಯುವದು, ಹಗಲು ಹೋಗಿ ನನ್ನ ಸುತ್ತಲು ಇರುಳಾಗುವದು ಎಂದು ಹೇಳಿಕೊಂಡರೇನು?
Kannada Bible (KNCL) BSI 2016
“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,