Psalms 139:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
Kannada BSI Bible 2016
ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
Kannada Bible (KNCL) BSI 2016
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.