Psalms 139:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
Kannada BSI Bible 2016
ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
Kannada Bible (KNCL) BSI 2016
ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.