Psalms 139:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
Kannada BSI Bible 2016
ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
Kannada Bible (KNCL) BSI 2016
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.