Psalms 14:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Kannada BSI Bible 2016
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Kannada Bible (KNCL) BSI 2016
“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.