Psalms 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
Kannada BSI Bible 2016
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ
Kannada Bible (KNCL) BSI 2016
ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.