Psalms 140:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
Kannada BSI Bible 2016
ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು; ಬಲಾತ್ಕಾರಿಗಳಿಗೆ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
Kannada Bible (KNCL) BSI 2016
ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.