Psalms 140:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ.
Kannada BSI Bible 2016
ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.
Kannada Bible (KNCL) BSI 2016
ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.