Psalms 141:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
Kannada BSI Bible 2016
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
Kannada Bible (KNCL) BSI 2016
ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.