Psalms 141:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
Kannada BSI Bible 2016
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
Kannada Bible (KNCL) BSI 2016
ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.