Psalms 141:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
Kannada BSI Bible 2016
ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಡುಕರು ಒಡ್ಡಿದ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; ಅವರಿಟ್ಟ ಬೋನಿಗೆ ನನ್ನನ್ನು ತಪ್ಪಿಸು.
Kannada Bible (KNCL) BSI 2016
ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.