Psalms 142:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
Kannada BSI Bible 2016
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
Kannada Bible (KNCL) BSI 2016
ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.