Psalms 142:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
Kannada BSI Bible 2016
ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯಿಂದ ನನ್ನನ್ನು ಬಿಡಿಸು; ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
Kannada Bible (KNCL) BSI 2016
ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.