Psalms 143:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
Kannada BSI Bible 2016
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು.
Kannada Bible (KNCL) BSI 2016
ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.