Psalms 143:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
Kannada BSI Bible 2016
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.
Kannada Bible (KNCL) BSI 2016
ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.