Psalms 143:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
Kannada BSI Bible 2016
ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
Kannada Bible (KNCL) BSI 2016
ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ, ನಾನು ನೆಲಕಚ್ಚುವಂತೆ ಮಾಡಿದ್ದಾನೆ. ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನು ಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.