Psalms 144:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
Kannada BSI Bible 2016
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ.
Kannada Bible (KNCL) BSI 2016
ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.