Psalms 144:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
Kannada BSI Bible 2016
ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಪಟವಚನದವರೂ ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
Kannada Bible (KNCL) BSI 2016
ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.